Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:8 - ಪರಿಶುದ್ದ ಬೈಬಲ್‌

8 ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:8
15 ತಿಳಿವುಗಳ ಹೋಲಿಕೆ  

ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು.


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.


ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.


ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.


ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.


ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.


ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”


ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು