ನಹೂಮ 2:9 - ಪರಿಶುದ್ದ ಬೈಬಲ್9 ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧ ಶ್ರೇಷ್ಠವಸ್ತುಗಳ ನಿಧಿಗೂ ಪಾರವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬೆಳ್ಳಿಯನ್ನು ಸುಲಿದುಕೊಳ್ಳಿರಿ; ಬಂಗಾರವನ್ನು ಸುಲಿದುಕೊಳ್ಳಿರಿ. ಕೂಡಿಸಿಟ್ಟ ಧನಕ್ಕೂ, ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ. ಅಧ್ಯಾಯವನ್ನು ನೋಡಿ |
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: