Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:10 - ಪರಿಶುದ್ದ ಬೈಬಲ್‌

10 ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿಬಿಟ್ಟರು; ಅದರ ಘನವಂತರಿಗೋಸ್ಕರ ಚೀಟುಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:10
17 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.


ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.


ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು.


ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.


ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.


ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.


ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.


ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು.


ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”


ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯಕ್ಕಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನ್ನೆಲುಬನ್ನು ತಿರುಗಿಸಿ ಮುರಿದುಬಿಟ್ಟೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು