ನಹೂಮ 3:12 - ಪರಿಶುದ್ದ ಬೈಬಲ್12 ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು. ಅಧ್ಯಾಯವನ್ನು ನೋಡಿ |