ನಹೂಮ 3:17 - ಪರಿಶುದ್ದ ಬೈಬಲ್17 ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಪ್ರಭುಗಳು ವಿುಡತೆಗಳಂತಿದ್ದಾರೆ, ವಿುಡತೆಯ ದಂಡು ಶೀತದಿನದಲ್ಲಿ ಬೇಲಿಗಳೊಳಗೆ ಇಳಿದಿದ್ದು ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ಕಾವಲುಗಾರರು ಮಿಡತೆಗಳ ಹಾಗೆಯೂ, ನಿನ್ನ ಅಧಿಪತಿಗಳು ತಂಪಾದ ದಿವಸದಲ್ಲಿ ಬೇಲಿಗಳೊಳಗೆ ಇಳಿದುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ. ಸೂರ್ಯೋದಯವಾಗುವಾಗ ಹಾರಿ ಹೋಗುತ್ತವೆ. ಆಗ ಅವು ಎಲ್ಲಿದ್ದಾವೆಂದು ಅವುಗಳ ಸ್ಥಳವು ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |
“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.