ನಹೂಮ 3:3 - ಪರಿಶುದ್ದ ಬೈಬಲ್3 ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ರಾಹುತರ ರಭಸ, ಥಳಥಳಿಸುವ ಕತ್ತಿ, ವಿುಂಚುವ ಈಟಿ, ಅಸಂಖ್ಯಾತ ಹತರು, ಶವಗಳ ಮಹಾರಾಶಿ! ಸತ್ತವರು ಲೆಕ್ಕವೇ ಇಲ್ಲ, [ನುಗ್ಗುವವರು] ಅವರ ಹೆಣಗಳನ್ನು ಎಡವುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸವಾರರು ಹತ್ತುತ್ತಾರೆ, ಈಟಿಗಳು ಥಳಥಳಿಸುತ್ತವೆ, ಖಡ್ಗಗಳು ಮಿಂಚುತ್ತವೆ, ಹತರಾದವರು ಬಹಳ; ಹೆಣಗಳ ರಾಶಿ; ಅಸಂಖ್ಯಾತ ಮೃತ ದೇಹಗಳು, ಶವಗಳ ಮೇಲೆ ತತ್ತರಿಸುತ್ತಿರುವ ಜನರು, ಅಧ್ಯಾಯವನ್ನು ನೋಡಿ |