ನಹೂಮ 3:4 - ಪರಿಶುದ್ದ ಬೈಬಲ್4 ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅತಿಸುಂದರಿಯೂ ಮಂತ್ರತಂತ್ರನಿಪುಣಳೂ ಜನಾಂಗಗಳನ್ನು ತನ್ನ ಸೂಳೆತನದಿಂದ, ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ಸೂಳೆಯ ಲೆಕ್ಕವಿಲ್ಲದ ಸೂಳೆತನಗಳ ನಿವಿುತ್ತ ಇದೆಲ್ಲಾ ಆಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ, ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ. ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ, ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ? ಅಧ್ಯಾಯವನ್ನು ನೋಡಿ |