Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:8 - ಪರಿಶುದ್ದ ಬೈಬಲ್‌

8 ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ನೋ ಆಮೋನಿಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು, ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತ ನೀನು ಒಳ್ಳೆಯವಳೋ? ಅವಳ ಸುತ್ತಲೂ ನೀರಿತ್ತು. ನದಿ ಅವಳ ರಕ್ಷಣೆ, ನೀರು ಅವಳ ಗೋಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:8
8 ತಿಳಿವುಗಳ ಹೋಲಿಕೆ  

ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಬೇರೆ ಜನಾಂಗಗಳು ನೀನು ಗೋಳಾಡುವದನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಬ್ಬ ಶೂರ ಸೈನಿಕನು’ ಮತ್ತೊಬ್ಬ ‘ಶೂರ ಸೈನಿಕನನ್ನು’ ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”


ಅದು ಯಾವ ಮಹತ್ವವೂ ಇಲ್ಲದ ರಾಜ್ಯವಾಗಿರುವುದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಧಿಕಾರ ನಡೆಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು