Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:11 - ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:11
27 ತಿಳಿವುಗಳ ಹೋಲಿಕೆ  

“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.


ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,


ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.


ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.


ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.


ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.


ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.


“ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು.


ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.


ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.


ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.


ಅನ್ಯ ಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.


ನಾನು ನಿಮಗೆ ದಯೆತೋರುತ್ತೇನೆ. ಬಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನ್ನು ನಿಮ್ಮ ದೇಶಕ್ಕೆ ಮರಳಿ ತರುವನು.’


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು