ನೆಹೆಮೀಯ 1:2 - ಪರಿಶುದ್ದ ಬೈಬಲ್2 ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.