ನೆಹೆಮೀಯ 1:4 - ಪರಿಶುದ್ದ ಬೈಬಲ್4 ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ. ಅಧ್ಯಾಯವನ್ನು ನೋಡಿ |
ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.