ನೆಹೆಮೀಯ 1:5 - ಪರಿಶುದ್ದ ಬೈಬಲ್5 ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ, ಅಧ್ಯಾಯವನ್ನು ನೋಡಿ |
ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.