ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.
ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”
“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.
ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.
ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.
ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು.
ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.
ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.
“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.
“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.
ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.