9 ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.
9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.
9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,
9 ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.
9 ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.
ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.
ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.
ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.
“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.
“ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ.
ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ,
ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.
“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.
“ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ.