Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:37 - ಪರಿಶುದ್ದ ಬೈಬಲ್‌

37 “ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕರಿಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವೆವು; ನಮ್ಮ ಭೂವಿುಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:37
23 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.


“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.


ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು.


ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.


ನಿಮ್ಮ ಯಾಜಕರಿಗೆ ನಿಮ್ಮ ಬೆಳೆಯ ಪ್ರಥಮ ಫಲವನ್ನು ಕೊಡಬೇಕು. ನಿಮ್ಮ ಧಾನ್ಯಗಳ ಪ್ರಥಮ ಫಲವನ್ನು, ದ್ರಾಕ್ಷಾರಸದಲ್ಲಿ, ಎಣ್ಣೆಯಲ್ಲಿ ಮತ್ತು ನಿಮ್ಮ ಉಣ್ಣೆಯಲ್ಲಿ ಪ್ರಥಮ ಫಲವನ್ನು ಕೊಡಬೇಕು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.


ಇಸ್ರೇಲಿನ ಮತ್ತು ಯೆಹೂದದ ಊರುಗಳಲ್ಲಿ ವಾಸವಾಗಿದ್ದ ಜನರು ತಮ್ಮ ದನಕರುಗಳಲ್ಲಿ ಮತ್ತು ಕುರಿಗಳಲ್ಲಿ ದಶಾಂಶವನ್ನು ತಂದುಕೊಟ್ಟರು. ಯೆಹೋವನಿಗೆ ಮೀಸಲಾಗಿ ವಿಶೇಷ ಸ್ಥಳದಲ್ಲಿ ಇಡತಕ್ಕ ಪವಿತ್ರ ವಸ್ತುಗಳಲ್ಲಿಯೂ ದಶಾಂಶವನ್ನು ತಂದುಕೊಟ್ಟರು. ಇವುಗಳನ್ನೆಲ್ಲ ಅವರು ತಮ್ಮ ದೇವರಾದ ಯೆಹೋವನಿಗೆ ತಂದು ರಾಶಿ ಹಾಕಿದರು.


ರೊಟ್ಟಿಯ ಮೊದಲನೇ ತುಂಡನ್ನು ದೇವರಿಗೆ ಅರ್ಪಿಸಿದಾಗ, ಇಡೀ ರೊಟ್ಟಿಯೇ ಪವಿತ್ರವಾಯಿತು. ಮರದ ಬೇರುಗಳು ಪವಿತ್ರವಾಗಿದ್ದರೆ, ಆ ಮರದ ಕೊಂಬೆಗಳು ಸಹ ಪವಿತ್ರವಾಗಿವೆ.


“ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.


ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.


ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.


“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.


ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.


“ಮನುಷ್ಯರಲ್ಲಾಗಲಿ ಪ್ರಾಣಿಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಳ್ಳಬೇಕು.


ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು