Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:38 - ಪರಿಶುದ್ದ ಬೈಬಲ್‌

38 ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:38
11 ತಿಳಿವುಗಳ ಹೋಲಿಕೆ  

ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.


“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.


ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.


“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.


ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.


“ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.


ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು