ನೆಹೆಮೀಯ 10:39 - ಪರಿಶುದ್ದ ಬೈಬಲ್39 ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇಸ್ರಾಯೇಲ್ಯರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು ಸೇವೆನಡಿಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ ಪವಿತ್ರಾಲಯದ ಪಾತ್ರೆಗಳೂ ಇರುವ ಕೊಠಡಿಗಳಲ್ಲಿ ಇಡಬೇಕು. ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವದಿಲ್ಲ ಎಂದು ಬರೆದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು. ಅಧ್ಯಾಯವನ್ನು ನೋಡಿ |