Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:14 - ಪರಿಶುದ್ದ ಬೈಬಲ್‌

14 ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. (ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪರಾಕ್ರಮಶಾಲಿಗಳಾಗಿದ್ದ ಅವರ ಸಹೋದರರು 128 ಮಂದಿ ಇದ್ದರು. ಹಗ್ಗೆದೋಲೀಮನ ಮಗನಾದ ಜಬ್ದಿಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:14
6 ತಿಳಿವುಗಳ ಹೋಲಿಕೆ  

ಮಲ್ಕೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಪೈ; (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇಮೋತನು ಇಮ್ಮೇರನ ಮಗ.)


ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ಷೂಬನ ಮಗನಾದ ಶೆಮಾಯ; (ಹಷ್ಷೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನ್ನೀಯ ಮಗ.)


ಮೀಕ ವಂಶಕ್ಕೆ ಸೇರಿದ ಉಜ್ಜೀಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು. ಉಜ್ಜೀಯು ಬಾನೀಯ ಮಗ. (ಬಾನೀಯು ಹಷಬ್ಯನ ಮಗ; ಹಷಬ್ಯನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೀಯು ಆಸಾಫನ ಸಂತಾನಕ್ಕೆ ಸೇರಿದವನಾಗಿದ್ದನು.


ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು.


ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು.


ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು