Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:3 - ಪರಿಶುದ್ದ ಬೈಬಲ್‌

3 ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದ [ಯೆಹೂದ] ಸಂಸ್ಥಾನಪ್ರಧಾನರ ಪಟ್ಟಿ. (ಸಾಧಾರಣ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ದೇವಸ್ಥಾನದಾಸರೂ ಸೊಲೊಮೋನನ ದಾಸರ ವಂಶದವರೂ ತಮ್ಮ ತಮ್ಮ ಸ್ವಾಸ್ತ್ಯಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:3
14 ತಿಳಿವುಗಳ ಹೋಲಿಕೆ  

ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.


ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್,


ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.


ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು.


ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು.


ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.


ಯೆಹೂದ ಮತ್ತು ಬೆನ್ಯಾಮೀನನ ಕುಟುಂಬಗಳ ಇತರರು ಜೆರುಸಲೇಮ್ ನಗರದಲ್ಲಿ ವಾಸಿಸಿದರು.) ಜೆರುಸಲೇಮಿಗೆ ಬಂದ ಯೆಹೂದನ ಸಂತಾನದವರು ಯಾರೆಂದರೆ: ಉಜ್ಜೀಯನ ಮಗನಾದ ಅತಾಯ. (ಉಜ್ಜೀಯನು ಜೆಕರ್ಯನ ಮಗ; ಜೆಕರ್ಯನು ಅಮರ್ಯನ ಮಗ; ಅಮರ್ಯನು ಶೆಫಟ್ಯನ ಮಗ; ಶೆಫಟ್ಯನು ಮಹಲಲೇಲನ ಮಗ; ಮಹಲಲೇಲ ಪೆರೆಚನ ಸಂತಾನದವನು.)


ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:


ಯಾಜಕರಲ್ಲಿ: ಯೆದಾಯನವರಾದ ಯೇಷೂವನ ಸಂತಾನದವರು 973


ಲೇವಿಕುಲದವರಲ್ಲಿ: ಹೋದವ್ಯನವರಾದ ಯೇಷೂವನ ಮತ್ತು ಕದ್ಮೀಯೇಲನ ಸಂತಾನದವರು 74


ದೇವಾಲಯದ ಸೇವಕರಲ್ಲಿ: ಜೀಹನ ಸಂತಾನದವರು, ಹಸೂಫ, ಟಬ್ಬಾವೋತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು