Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:10 - ಪರಿಶುದ್ದ ಬೈಬಲ್‌

10 ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಷೂವನು ಯೋಯಾಕೀಮನನ್ನೂ ಯೋಯಾಕೀಮನು ಎಲ್ಯಾಷೀಬನನ್ನೂ ಎಲ್ಯಾಷೀಬನು ಯೋಯಾದನನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಯೇಷೂವನು ಯೋಯಾಕೀಮನ ತಂದೆ, ಯೋಯಾಕೀಮನು ಎಲ್ಯಷೀಬನನ್ನು ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:10
11 ತಿಳಿವುಗಳ ಹೋಲಿಕೆ  

ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.


ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನನಗೆ ಜೆರುಸಲೇಮಿನಲ್ಲಿದ್ದಾಗ ತಿಳಿಯಿತು.


ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.


ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು.


ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


ಬಕ್ಬುಕ್ಯ ಮತ್ತು ಉನ್ನೀ ಆ ಲೇವಿಯರ ಸಂಬಂಧಿಕರಾಗಿದ್ದರು. ಕಾರ್ಯಕ್ರಮಗಳಲ್ಲಿ ಇವರು ತಮ್ಮ ಸಂಬಂಧಿಕರ ಎದುರು ನಿಲ್ಲುತ್ತಿದ್ದರು.


ಯೋಯಾದನು ಯೋನಾತಾನನ ತಂದೆ; ಯೋನಾತಾನನು ಯದ್ದೂವನ ತಂದೆ.


ಒಂಭತ್ತನೆಯ ವರ್ಗ ಯೆಷೂವನದು. ಹತ್ತನೆಯ ವರ್ಗ ಶೆಕನ್ಯನದು.


ಹನ್ನೊಂದನೆಯ ವರ್ಗ ಎಲ್ಯಾಷೀಬನದು. ಹನ್ನೆರಡನೆಯ ವರ್ಗ ಯಾಕೀಮನದು.


ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು