Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:23 - ಪರಿಶುದ್ದ ಬೈಬಲ್‌

23 ಎಲ್ಯಾಷೀಬನ ಮಗನಾದ ಯೋಹಾನಾನನ ತನಕ ಲೇವಿಕುಲದ ಕುಟುಂಬನಾಯಕರ ಹೆಸರುಗಳನ್ನು ಚರಿತ್ರಾಪುಸ್ತಕದಲ್ಲಿ ದಾಖಲು ಮಾಡಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಎಲ್ಯಾಷೀಬನ ಮಗನಾದ ಯೋಹಾನಾನನ ಕಾಲದವರೆಗೆ ಲೇವಿ ಎಂಬವನ ಪುತ್ರರಾದ ಪಿತೃಗಳ ಮುಖ್ಯಸ್ಥರು ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:23
3 ತಿಳಿವುಗಳ ಹೋಲಿಕೆ  

ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು