ನೆಹೆಮೀಯ 12:36 - ಪರಿಶುದ್ದ ಬೈಬಲ್36 ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ವಿುಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ದೇವರ ಮನುಷ್ಯನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರೀಯನ ಸಹೋದರರಾದ ಶೆಮಾಯ, ಅಜರಯೇಲ್, ಮಿಲಲೈ, ಗಿಲಲೈ, ಮಾಯೈ, ನೆತನೆಯೇಲ್, ಯೆಹೂದ, ಹನಾನೀ ಎಂಬವರು ನಡೆದರು; ನಿಯಮಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು. ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.