Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:43 - ಪರಿಶುದ್ದ ಬೈಬಲ್‌

43 ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೇವರು ತಮಗೆ ವಿಶೇಷಾನಂದವನ್ನುಂಟುಮಾಡಿದ್ದರಿಂದ ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವ ಮಾಡಿದರು. ಯೆರೂಸಲೇವಿುನ ಉತ್ಸವದ ಹರ್ಷಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:43
29 ತಿಳಿವುಗಳ ಹೋಲಿಕೆ  

ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.


ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.


ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.


ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.


ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ತರುವಾಯ ಯೆಹೋಷಾಫಾಟನು ತನ್ನ ಸೈನ್ಯವನ್ನು ಜೆರುಸಲೇಮಿಗೆ ನಡಿಸಿದನು. ಶತ್ರುಗಳ ಮೇಲೆ ಯೆಹೋವನು ನೀಡಿದ ಜಯಕ್ಕಾಗಿ ಅವರು ಹರ್ಷಿಸಿದರು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು.


ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”


ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.


ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.


ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು