ನೆಹೆಮೀಯ 12:44 - ಪರಿಶುದ್ದ ಬೈಬಲ್44 ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿ |