ನೆಹೆಮೀಯ 13:1 - ಪರಿಶುದ್ದ ಬೈಬಲ್1 ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರಪಾರಾಯಣವು ನಡೆಯುತ್ತಿರಲಾಗಿ ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು. ಅಧ್ಯಾಯವನ್ನು ನೋಡಿ |
ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.