11 ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು.
11 ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”
“ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.
ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.
ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.