Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:2 - ಪರಿಶುದ್ದ ಬೈಬಲ್‌

2 ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ಅವರು ಇಸ್ರಾಯೇಲ್ಯರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವದಾಗಿ ಕಂಡು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:2
12 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.


ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.


ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು