ನೆಹೆಮೀಯ 13:22 - ಪರಿಶುದ್ದ ಬೈಬಲ್22 ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ. ಅಧ್ಯಾಯವನ್ನು ನೋಡಿ |
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.