Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:23 - ಪರಿಶುದ್ದ ಬೈಬಲ್‌

23 ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:23
16 ತಿಳಿವುಗಳ ಹೋಲಿಕೆ  

“ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.


ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.


ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?


ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.


ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.


ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.


ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಡೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು.


ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು.


ಆಕೆಯ ಗಂಡುಮಕ್ಕಳು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಯಾದರು. ಒಬ್ಬನ ಹೆಂಡತಿಯ ಹೆಸರು ಒರ್ಫಾ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೋವಾಬ್‌ನಲ್ಲಿ ಸುಮಾರು ಹತ್ತು ವರ್ಷವಿದ್ದರು.


“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು