Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:9 - ಪರಿಶುದ್ದ ಬೈಬಲ್‌

9 ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:9
5 ತಿಳಿವುಗಳ ಹೋಲಿಕೆ  

ಯಾಜಕರೂ ಲೇವಿಯರೂ ತಮ್ಮ ದೇವರಿಗೋಸ್ಕರ ತಮ್ಮ ಕೆಲಸಗಳನ್ನು ಮಾಡಿದರು. ಶುದ್ಧೀಕರಣ ಆಚರಣೆಯ ಮೂಲಕ ಜನರನ್ನು ಶುದ್ಧರನ್ನಾಗಿ ಮಾಡಿದರು. ಗಾಯಕರೂ ದ್ವಾರಪಾಲಕರೂ ತಮ್ಮತಮ್ಮ ಕೆಲಸಗಳನ್ನು ಮಾಡಿದರು. ದಾವೀದನು ಮತ್ತು ಸೊಲೊಮೋನನು ಆಜ್ಞಾಪಿಸಿದ್ದ ಪ್ರಕಾರವೇ ಅವರು ಎಲ್ಲವನ್ನು ಮಾಡಿದರು.


“ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು