ನೆಹೆಮೀಯ 2:1 - ಪರಿಶುದ್ದ ಬೈಬಲ್1 ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.