Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:13 - ಪರಿಶುದ್ದ ಬೈಬಲ್‌

13 ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇವಿುನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಲಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:13
9 ತಿಳಿವುಗಳ ಹೋಲಿಕೆ  

ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದೆನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆಹೋದರು.


ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರೀಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು