Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:19 - ಪರಿಶುದ್ದ ಬೈಬಲ್‌

19 ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:19
22 ತಿಳಿವುಗಳ ಹೋಲಿಕೆ  

ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.


ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.


ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು.


“ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿ ಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು.


ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.


ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.


ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.


“ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು.


ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.


ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.


ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.


ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.


ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು