Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:3 - ಪರಿಶುದ್ದ ಬೈಬಲ್‌

3 ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:3
21 ತಿಳಿವುಗಳ ಹೋಲಿಕೆ  

ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.


ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.


ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.


ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.


ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು.


ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.


ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.


ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.


ಅರಸನಾದ ನೆಬೂಕದ್ನೆಚ್ಚರನಿಗೆ ಅವರು, “ಮಹಾರಾಜನೇ, ಚಿರಂಜೀವಿಯಾಗಿರು!


ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.


ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.


ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.


ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ.


ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು