ನೆಹೆಮೀಯ 2:4 - ಪರಿಶುದ್ದ ಬೈಬಲ್4 ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.