Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:5 - ಪರಿಶುದ್ದ ಬೈಬಲ್‌

5 ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ತಿರಿಗಿ ಕಟ್ಟುವದಕ್ಕೋಸ್ಕರ ಯೆಹೂದದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:5
12 ತಿಳಿವುಗಳ ಹೋಲಿಕೆ  

ರಾಜರಾದ ತಾವು ಅಪೇಕ್ಷಿಸಿದರೆ ರಾಜವೃತ್ತಾಂತವನ್ನು ನೀವೇ ಪರಿಶೋಧಿಸಿ. ಜೆರುಸಲೇಮಿನಲ್ಲಿ ಮತ್ತೆ ದೇವಾಲಯವನ್ನು ಕಟ್ಟಲು ರಾಜ ಸೈರಸನು ಆಜ್ಞಾಪಿಸಿದ್ದು ನಿಜವೇ ಎಂಬುದನ್ನು ನೀವೇ ನೋಡಿರಿ. ಆಮೇಲೆ, ಅರಸನೇ, ಇದರ ವಿಚಾರವಾಗಿ ಏನು ತೀರ್ಮಾನ ಮಾಡಿದ್ದೀರೆಂದು ನಮಗೆ ಪತ್ರದ ಮೂಲಕ ತಿಳಿಸಿರಿ.


ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.


ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.


ಆಗ ಎಸ್ತೇರ್ ರಾಣಿಯು, “ರಾಜನೇ, ನೀನು ನನ್ನನ್ನು ಮೆಚ್ಚಿ ಪ್ರೀತಿಸುವದಾದರೆ ದಯಮಾಡಿ ನಾನು ಬದುಕುವಂತೆ ಮಾಡು. ಅಲ್ಲದೇ ನನ್ನ ಜನರನ್ನು ಉಳಿಸು. ಇದೇ ನನ್ನ ಬಿನ್ನಹ.


ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.


ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


“ಆದ್ದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನೆಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.


ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, “ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವಿ?” ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು