Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:8 - ಪರಿಶುದ್ದ ಬೈಬಲ್‌

8 ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:8
18 ತಿಳಿವುಗಳ ಹೋಲಿಕೆ  

ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ.


ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ.


ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು