ನೆಹೆಮೀಯ 2:9 - ಪರಿಶುದ್ದ ಬೈಬಲ್9 ಯೂಫ್ರೇಟೀಸ್ ನದಿಯ ಪಶ್ಚಿಮದಲ್ಲಿರುವ ರಾಜ್ಯಪಾಲರಿಗೆ ಅರಸನು ಕೊಟ್ಟ ಪತ್ರವನ್ನು ಕೊಟ್ಟೆನು. ರಾಜನು ನನ್ನೊಂದಿಗೆ ಸಿಪಾಯಿಗಳನ್ನೂ ಸೈನ್ಯಾಧಿಪತಿಗಳನ್ನೂ ಅಶ್ವ ಸೈನಿಕರನ್ನೂ ಕಳುಹಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದೂ ಅಲ್ಲದೆ ನನ್ನನ್ನು ಸಾಗಕಳುಹಿಸುವುದಕ್ಕೆ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ರಾಜನ ಪತ್ರಗಳನ್ನು ಅವರಿಗೆ ತೋರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅರಸನು ಅವುಗಳನ್ನು ನನಗೆ ಕೊಟ್ಟದ್ದಲ್ಲದೆ ನನ್ನನ್ನು ಸಾಗಕಳುಹಿಸುವದಕ್ಕೋಸ್ಕರ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ಹೊಳೆಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿ |