ನೆಹೆಮೀಯ 3:1 - ಪರಿಶುದ್ದ ಬೈಬಲ್1 ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.