ನೆಹೆಮೀಯ 3:13 - ಪರಿಶುದ್ದ ಬೈಬಲ್13 ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನೂ ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣಿ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಣಿವೆಯ ಬಾಗಿಲನ್ನು ಸರಿಪಡಿಸಿದವರು ಹಾನೂನನು ಹಾಗು ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಗ್ಗಿನ ಬಾಗಲನ್ನು ಜೀರ್ಣೋದ್ಧಾರಮಾಡಿದವರು ಹಾನೂನನೂ ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ 450 ಮೀಟರ್ ಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |