ನೆಹೆಮೀಯ 3:16 - ಪರಿಶುದ್ದ ಬೈಬಲ್16 ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿ |
ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.