Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:17 - ಪರಿಶುದ್ದ ಬೈಬಲ್‌

17 ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವನ ಆಚೆ ಜೀರ್ಣೋದ್ಧಾರಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:17
8 ತಿಳಿವುಗಳ ಹೋಲಿಕೆ  

ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.


ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ


ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.


ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿಮಾಡಿದರು. ಬಿನೈಹೇನಾದಾದನ ಮಗ.


ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಶೆಕನ್ಯ, ರೆಹುಮ್, ಮೆರೇಮೋತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು