Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:19 - ಪರಿಶುದ್ದ ಬೈಬಲ್‌

19 ಮಿಚ್ಪದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಲುಗಳ ಎದುರಿಗಿರುವ ಭಾಗವನ್ನು ವಿುಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವನ ಸಮೀಪದಲ್ಲಿ ಗೋಡೆಯ ಮೂಲೆಯಲ್ಲಿರುವ ಆಯುಧ ಶಾಲೆಗೆ ಹೋಗುವ ಮೆಟ್ಟಿಲು ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ, ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:19
6 ತಿಳಿವುಗಳ ಹೋಲಿಕೆ  

ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.


ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್‌ನ ಸಂತತಿಯವನಾದ ಬಿನ್ನೂಯ್,


ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.


ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿಮಾಡಿದರು. ಬಿನೈಹೇನಾದಾದನ ಮಗ.


ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು