Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:23 - ಪರಿಶುದ್ದ ಬೈಬಲ್‌

23 ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇವರ ಆಚೆ, ಬೆನ್ಯಾಮೀನ್ ಹಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ದುರಸ್ತಿಮಾಡಿಸಿದರು. ಇವರ ಆಚೆ, ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ: ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರ ಆಚೆ ಬೆನ್ಯಾಮೀನ್ ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದರು. ಇವರ ಆಚೆ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ; ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇವರ ಆಚೆ, ಬೆನ್ಯಾಮೀನ್ ಹಷ್ಷೂಬರು, ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ತರುವಾಯ ಅನನ್ಯನ ಮೊಮ್ಮಗನೂ, ಮಾಸೇಯನ ಮಗನೂ ಆದ ಅಜರ್ಯ, ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:23
7 ತಿಳಿವುಗಳ ಹೋಲಿಕೆ  

ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,


ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.


ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.


ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು.


ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.


ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು