Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:24 - ಪರಿಶುದ್ದ ಬೈಬಲ್‌

24 ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ದುರಸ್ತಿಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವನ ಆಚೆ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:24
7 ತಿಳಿವುಗಳ ಹೋಲಿಕೆ  

ಮಿಚ್ಪದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು.


ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್‌ನ ಸಂತತಿಯವನಾದ ಬಿನ್ನೂಯ್,


ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು.


ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.


ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು.


ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ಮೀಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು.


ಕದ್ಮೀಯೇಲ್ ಮತ್ತು ಅವನ ಸಹೋದರರಾದ ಶೆಬನ್ಯ, ಹೋದೀಯ, ಕೆಲೀಟ, ಪೆಲಾಯ ಮತ್ತು ಹಾನಾನ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು