Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:26 - ಪರಿಶುದ್ದ ಬೈಬಲ್‌

26 ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಮೂಲೆ ಬುರುಜಿನ ಮತ್ತು ನೀರುಬಾಗಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನದಾಸರ ನಿವಾಸಸ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:26
13 ತಿಳಿವುಗಳ ಹೋಲಿಕೆ  

ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು.


ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.


ಅವರು ಬುಗ್ಗೆ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, “ನೀರು” ಎಂಬ ದ್ವಾರದ ಕಡೆಗೆ ಹೋದರು.


ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.


ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ಯೋತಾಮನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.


ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.


ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು.


ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು