ನೆಹೆಮೀಯ 3:5 - ಪರಿಶುದ್ದ ಬೈಬಲ್5 ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಲ್ಲಿಂದ ಮುಂದಕ್ಕೆ ತೆಕೋವದವರು ಗೋಡೆಯನ್ನು ದುರಸ್ತಿ ಮಾಡಿಸಿದರು. ಆದರೆ ತೆಕೋವದವರಲ್ಲಿ ಶ್ರೇಷ್ಠರಾದವರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.