7 ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.
7 ಅಲ್ಲಿಂದ ಯೂಫ್ರೇಟೀಸ್ ನದಿಯ ರಾಜ್ಯಪಾಲನ ಅಧಿಕಾರದಲ್ಲಿರುವ ಸ್ಥಳಗಳಿಂದ ಗಿಬ್ಯೋನ್ ಮತ್ತು ಮಿಚ್ಪ ಊರುಗಳ, ಗಿಬ್ಯೋನಿನವನಾದ ಮೆಲೆಟ್ಯ, ಮೇರೊನೋತಿನವನಾದ ಯಾದೋನ್ ಇವರೂ, ಜೀರ್ಣೋದ್ಧಾರ ಮಾಡಿದರು.
(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.