ನೆಹೆಮೀಯ 4:10 - ಪರಿಶುದ್ದ ಬೈಬಲ್10 ಆ ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”
ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.