Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:11 - ಪರಿಶುದ್ದ ಬೈಬಲ್‌

11 ಅಲ್ಲದೆ ನಮ್ಮ ವೈರಿಗಳು, ‘ನಾವು ಅವರ ಮೇಲೆ ಇದ್ದಕ್ಕಿದ್ದಂತೆ ಆಕ್ರಮಣ ಮಾಡುವುದರಿಂದ ನಾವು ಅವರ ಮಧ್ಯದಲ್ಲಿರುವ ತನಕ ಅವರಿಗೆ ಗೊತ್ತಾಗುವುದೂ ಇಲ್ಲ ಕಾಣುವುದೂ ಇಲ್ಲ. ನಾವು ಅವರನ್ನು ಕೊಂದಾಗ ಕೆಲಸ ತಾನಾಗಿಯೇ ನಿಂತುಹೋಗುವುದು’ ಎಂದು ಹೇಳುತ್ತಿದ್ದಾರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅತ್ತ ನಮ್ಮ ವಿರೋಧಿಗಳು, “ಅವರಿಗೆ ತಿಳಿಯದೆ, ಗೋಚರವಾಗದೆ, ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅತ್ತ ನಮ್ಮ ವಿರೋಧಿಗಳು - ಅವರಿಗೆ ತಿಳಿಯದೆಯೂ ಗೋಚರವಾಗದೆಯೂ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ವೈರಿಗಳು, “ಅವರು ತಿಳಿಯದ ಹಾಗೆಯೂ, ನೋಡದ ಹಾಗೆಯೂ ನಾವು ಅವರ ನಡುವೆ ಬಂದು, ಅವರನ್ನು ಕೊಂದುಹಾಕಿ, ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:11
10 ತಿಳಿವುಗಳ ಹೋಲಿಕೆ  

ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.


ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.


ನಾವು ದೇವರಿಗೆ ಪ್ರಾರ್ಥಿಸಿದೆವು ಮತ್ತು ನಮ್ಮ ಮೇಲೆ ಬೀಳಲು ಬರುವ ಶತ್ರುಗಳಿಗೆ ನಾವು ತಯಾರಿರುವಂತೆ ಹಗಲು ರಾತ್ರಿ ಪಹರೆ ಮಾಡಲು ಗೋಡೆಯ ಮೇಲೆ ಕಾವಲುಗಾರರನ್ನು ನೇಮಿಸಿದೆವು.


ಆ ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ.


ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತು ಬಾರಿ ನಮಗೆ ತಿಳಿಸಿದರು. “ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು